ಜಿ-20 ಶೃಂಗಸಭೆ: ಇಂಡಿಯಾ ಬದಲಿಗೆ ‘ಭಾರತ್’ ಹೆಸರಿನ ನಾಮಫಲಕ ಪ್ರದರ್ಶನ

ನವದೆಹಲಿ: ಇಂಡಿಯಾ ಹೆಸರು ಬದಲಾವಣೆ ವಿಚಾರ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿಯೂ ಇಂಡಿಯಾ ಬದಲಿಗೆ ‘ಭಾರತ್ ”ಹೆಸರಿನ ಪ್ರಸ್ತಾಪ ಬಂದಿದೆ.

ಇಂದು ಜಿ-20 ಶೃಂಗಸಭೆಯನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾಗ ದೇಶದ ಹೆಸರನ್ನು ‘ಭಾರತ್” ಎಂದು ಪ್ರದರ್ಶಿಸಲಾಯಿತು.  ಮೈಕ್ ನ ನೇಮ್ ಬೋರ್ಡ್ ನಲ್ಲಿಯೂ Bharat ಎಂದು ಪ್ರದರ್ಶಿಸಲಾಯಿತು.

ತಮ್ಮ ಉದ್ಘಾಟನಾ ಭಾ,ಣಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಜಿ-20 ಶೃಂಗಸಭೆ ಸ್ಥಳವಾದ ಭಾರತ್ ಮಂಟಪದಲ್ಲಿ ಅಮೆರಿಕ ಅಧ್ಯಕ್ಷ ಜೋ- ಬೈಡನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ವಿಶ್ವ ನಾಯಕರನ್ನು ಸ್ವಾಗತಿಸಿದರು.

ಜಿ-20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖದ ನಂತರ ವಿವಾದಕ್ಕ ಕಾರಣವಾಗಿದ್ದು, ವಿಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಅಲೈಯನ್ಸ್ (INDIA) ಎಂದು ಹೆಸರಿಟ್ಟಿರುವುದರಿಂದ ಹೆಸರು ಬದಲಾವಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಟೀಕಿಸುತ್ತಿವೆ. 

ಕೆಲವು ನಾಯಕರು ‘ಇಂಡಿಯಾ’ ಎಂಬ ಇಂಗ್ಲಿಷ್ ಹೆಸರನ್ನು ವಸಾಹತುಶಾಹಿ ಪರಂಪರೆ ಎಂದು ಪ್ರತಿಪಾದಿಸಿದ್ದಾರೆ.  ಆದಾಗ್ಯೂ, ಸಂವಿಧಾನದಲ್ಲಿ ದೇಶಕ್ಕೆ ಎರಡೂ ಹೆಸರುಗಳನ್ನು ಬಳಸಲಾಗಿದೆ ಎಂದು ಬಿಜೆಪಿಯ ಕೆಲವು ನಾಯಕರು ಹೇಳುವುದರೊಂದಿಗೆ ‘ಭಾರತ್ ವರ್ಸಸ್ ಇಂಡಿಯಾ’ ಚರ್ಚೆಗೆ ಸ್ವಲ್ಪ ಕಡಿವಾಣ ಹಾಕಿದ್ದಾರೆ. 

Latest Indian news

Popular Stories