ನಾಡಿನೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ

ಬೆಂಗಳೂರು: ಹಿಂದೂ ಧರ್ಮೀಯರ ಪವಿತ್ರ ದೊಡ್ಡ ಹಬ್ಬ ಗೌರಿ-ಗಣೇಶ ಚತುರ್ಥಿಯನ್ನು ಇಂದು ಸೋಮವಾರ ನಾಡಿನೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.

ಮುಂಜಾನೆಯೇ ಮನೆಯಲ್ಲಿ ಹೆಂಗಳೆಯರು ಮಕ್ಕಳು ಎದ್ದು ಮನೆ ಮುಂದೆ ಸಾರಿಸಿ ರಂಗೋಲಿ ಬಳಿದು ತೋರಣ ಕಟ್ಟಿ ಹಬ್ಬವನ್ನು ಸ್ವಾಗತಿಸುತ್ತಿದ್ದಾರೆ. ಬೆಳಗ್ಗೆಯೇ ಸ್ನಾನ ಮಾಡಿ ದೇವರ ಮನೆಯಲ್ಲಿ ಗಣೇಶ ಮೂರ್ತಿ ಇಟ್ಟು ಅಲಂಕಾರ ಮಾಡಿ, ನೈವೇದ್ಯ ಮಾಡಿ ಗೌರಿ-ಗಣೇಶ ಸ್ತೋತ್ರ, ದೇವರ ನಾಮ, ಅಷ್ಟೋತ್ತರಗಳನ್ನು ಮನೆಯವರೆಲ್ಲಾ ಸೇರಿ ಹೇಳಿ ಭಕ್ತಿಯಿಂದ ಪೂಜೆ ಮಾಡುತ್ತಿದ್ದಾರೆ. 

ಈ ಬಾರಿ ಗೌರಿ ಗಣೇಶ ಹಬ್ಬ ಒಟ್ಟಿಗೆ ಬಂದಿದೆ. ಹಾಗಾಗಿ ಹಲವು ಕಡೆಗಳಲ್ಲಿ ಇಂದು ಗೌರಿ ಗಣೇಶ ಹಬ್ಬವನ್ನು ಆಚರಿಸಿದರೆ ಕರಾವಳಿ, ಮಲೆನಾಡು ಭಾಗಗಳಲ್ಲಿ ನಾಳೆ ಗಣಪತಿ ಹೋಮ, ಪೂಜೆ ಮಾಡುತ್ತಾರೆ. 

ಒಂದಷ್ಟು ಕಡೆಗಳಲ್ಲಿ ಪರಿಸರ ಸ್ನೇಹಿ ಗಣಪನ ಮೂರ್ತಿಗಳನ್ನ ವಿತರಿಸುವ ಕೆಲಸ ಕೂಡ ನಡೆದಿದ್ದು, ಗಜಮುಖನನ್ನ ಸ್ವಾಗತಿಸಲು ಹಳ್ಳಿಯಿಂದ ದಿಲ್ಲಿವರೆಗೆ, ಗಲ್ಲಿ ಗಲ್ಲಿಯಲ್ಲೂ ಗಣಪತಿ ಬಪ್ಪಾ ಮೋರಿಯಾ ಎಂಬ ಕೂಗುವಿಕೆ ಕೇಳಿಬರುತ್ತಿದೆ.

Latest Indian news

Popular Stories