ಉಡುಪಿ-ಮಣಿಪಾಲ ರಸ್ತೆಯಲ್ಲಿ ಗ್ಯಾಂಗ್’ವಾರ್ ವೀಡಿಯೋ ವೈರಲ್; ಇಬ್ಬರ ಬಂಧನ

ಉಡುಪಿ: ಉಡುಪಿ- ಮಣಿಪಾಲ ರಸ್ತೆಯ ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ನಡೆಸುತ್ತಿದ್ದ ಎರಡು ತಂಡಗಳ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಅದರಂತೆ ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದ ಉಡುಪಿ ನಗರ ಪೊಲೀಸರು, ಗರುಡ ಗ್ಯಾಂಗಿನ ಕಾಪುವಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಬಂಧಿಸಿದ್ದಾರೆ.

ಇವರಿಂದ ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Latest Indian news

Popular Stories