ಗ್ಯಾಸ್ ಸಿಲಿಂಡರ್ ಸ್ಪೋಟ: ಒಂದೇ ಕುಟುಂಬದ ಐವರು ಮೃತ್ಯು, ನಾಲ್ವರ ಸ್ಥಿತಿ ಗಂಭೀರ

ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂದು ಒಂದೇ ಕುಟುಂಬದ ಐವರು ಮೃತಪಟ್ಟು ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಲಕ್ನೋದ ಕಾಕೋರಿಯ ಹತಾ ಹಜರತ್ ಸಾಹೇಬ್ ಕಾಕೋರಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು. ಇಲ್ಲಿ ವಾಸವಿದ್ದ ಮುಶೀರ್ ಅಲಿ ಜರ್ದೋಜಿ ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ ಪರಿಣಾಮ ಮನೆಯಲ್ಲಿದ್ದ ಒಂಬತ್ತು ಮಂದಿ ಗಂಭೀರ ಗಾಯಗೊಂಡಿದ್ದರು ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಮನೆಯೊಳಗೆ ಗಾಯಗೊಂಡು ಸಿಲುಕಿದ್ದ ಒಂಬತ್ತು ಮಂದಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸದೆ ಐವರು ಮೃತಪ್ಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಸಿಲಿಂಡರ್ ಸ್ಪೋಟದಿಂದ ಇಡೀ ಮನೆಗೆ ಹಾನಿಯಾಗಿದ್ದು ಅಲ್ಲದೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಘಟನೆಯಲ್ಲಿ ಮುಶೀರ್ ಅಲಿ ಮತ್ತು ಅವರ ಪತ್ನಿ ಹುಸ್ನಾ ಬಾನೊ, ಸೊಸೆ ಹುಮಾ, ಹಿಬಾ ಮತ್ತು ರಾಯ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಮುಶೀರ್ ಅವರ ಇಬ್ಬರು ಪುತ್ರಿಯರು, ಸೊಸೆ ಮತ್ತು ಮಗ ಅಜ್ಮತ್ ಗಂಭೀರ ಗಾಯಗೊಂಡಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡಿದೆ.

Latest Indian news

Popular Stories