ಬಡ ಮಹಿಳೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾದ “ಗೃಹಲಕ್ಷ್ಮಿ” ಹಣ

ಬೆಂಗಳೂರು: ಬೆಳಗಾವಿಯ ಮಹಿಳೆಯೊಬ್ಬರು ಕಳೆದ 10 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು, ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಘಟನೆ ರಾಮದುರ್ಗದ ಸುರೇಬಾನ – ಮನಿಹಾಳ ಗ್ರಾಮದಿಂದ ವರದಿಯಾಗಿದೆ.

ರಾಮದುರ್ಗದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ, ಹಲವು ತಿಂಗಳಿಂದ ಕಣ್ಣಿನ ಸಮಸ್ಯೆಗೆ ಈಡಾಗಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯ ಆಗಿತ್ತು.

ಹಣಕಾಸಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಸುಮ್ಮನಿದ್ದ ಸಕ್ಕುಬಾಯಿ, ಕಳೆದ 10 ತಿಂಗಳಿಂದ ರಾಜ್ಯ ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಡು, ಕಳೆದ ವಾರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ರಾಮದುರ್ಗದ ಡಾ.ವಿಜಯ್ ಸುಲ್ತಾನ್ ಪುರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪತಿ ಈರಣ್ಣ ಮಾತನಾಡಿ,ಗೃಹಲಕ್ಷ್ಮಿ ಯೋಜನೆ ನಮ್ಮ ಕುಟುಂಬವನ್ನು ಕೈಹಿಡಿಯಿತು. ಹಿಂದಿನ ಮಂಗಳವಾರ ನನ್ನ ಪತ್ನಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದರು. ಒಟ್ಟು 26 ಸಾವಿರ ಬಿಲ್ ಆಗಿದ್ದು, ಗೃಹಲಕ್ಷ್ಮಿ ಯೋಜನೆಯಿಂದ 20 ಸಾವಿರ ರೂಪಾಯಿ ಕೂಡಿಟ್ಟಿದ್ದೇವು. ಹೀಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅನುಕೂಲವಾಯಿತು ಎಂದು ಈರಣ್ಣ ಕರದಿನ ಸಂತಸ ವ್ಯಕ್ತಪಡಿಸಿದರು.

Latest Indian news

Popular Stories