ಬಿಜೆಪಿ-ಕಾಂಗ್ರೆಸ್ ಸರ್ಕಾರಗಳ ಹಗರಣ ತನಿಖೆ ಸಿಬಿಐಗೆ ಕೊಡಿ: ಹೊಂದಾಣಿಕೆ ರಾಜಕೀಯ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ ಆಪಾದನೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದ ಮೇಲೆ ಅವರು ಪ್ರತಿಯಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 22 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರೈತನ ತೆರಿಗೆ ಹಣ ಸಂಪೂರ್ಣ ದುರುಪಯೋಗ ಆಗುತ್ತಿದೆ ಎನ್ನುವುದು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಅನುಮಾನವಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳು ನಡೆದಿದೆ. ಅವುಗಳನ್ನು ಸಿಬಿಐಗೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಆವಾಗ ಹೇಳುತ್ತಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಅಪಾದಿಸುತ್ತಿದ್ದಾರೆ. ಉಭಯ ಪಕ್ಷಗಳ ನಾಯಕರು ಕೇವಲ ತನಿಖೆಯಾಗಲಿ ಎಂದು ಹೇಳುತ್ತಿದ್ದಾರೆ ವಿನಃ ಸಿಬಿಐಗೆ ನೀಡಲು ಯಾಕೆ ಹಿಂಜರಿಯುತ್ತಿದ್ದಾರೆ. ದೇಶದಲ್ಲಿ ಎರಡು ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ನೀಡಿದರೆ ರಾಜ್ಯ ಮತ್ತು ದೇಶದಲ್ಲಿ ಯಾರು ಭ್ರಷ್ಟಾಚಾರ ಹಗರಣಗಳು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿ ಜನರ ಮುಂದೆ ಬರುತ್ತದೆ. ಇಲ್ಲವಾದಲ್ಲಿ ಕೇವಲ ಪರಸ್ಪರ ಆರೋಪ ಆಪಾದನೆಗಳನ್ನು ಮಾಡಿದರೆ. ತಪ್ಪಿಸ್ತಸ್ಥರು ಯಾರು ಎಂಬುದು ಹೊರಗೆ ಬರುವುದಿಲ್ಲ. ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ. ಸಿಬಿಐಗೆ ನೀಡಲು ಯಾರು ಸಿದ್ದವಿಲ್ಲ. ಒಬ್ಬರನ್ನೊಬ್ಬರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಆರೋಪಿಸಿದರು. ಶಿಕಾರಿಪುರದಲ್ಲಿ ಈಗಿನ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಸನಗೌಡ ಯತ್ನಾಳ, ಪ್ರತಾಪ್ ಸಿಂಹ, ಸಿ.ಟಿ. ರವಿ ಅವರ ಮಾತುಗಳು ನೂರಕ್ಕೆ ನೂರು ಸತ್ಯ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇರುವುದರಿಂದ ರಾಜಕೀಯ ಭ್ರಷ್ಟಾಚಾರ, ವ್ಯಬಿಚಾರ ನಡೆಯುತ್ತಿರುವುದು ರಾಜ್ಯದ ಜನರಿಗೆ ಗೊತ್ತಾಗಿದೆ. ಈ ಹೊಂದಾಣಿಕೆ ಕೂಡಾ ಹೊರಗಡೆ ಬರುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳು, ಅವ್ಯವಹಾರಗಳನ್ನು ಸಿಬಿಐಗೆ ನೀಡಬೇಕು ಎಂದು ಬಾಗಲಕೋಟೆಯಲ್ಲಿ ಈಶ್ವರಪ್ಪ ಒತ್ತಾಯಿಸಿದರು.

Latest Indian news

Popular Stories