ಗೋ ಬ್ಯಾಕ್ ಅಭಿಯಾನ | ಕೆಲವು ಗಂಡಸರಿಗೆ ಅಧಿಕಾರ ನಮ್ಮ ಬಳಿಯೇ ಇರಬೇಕು ಎಂಬ ಭಾವನೆ – ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕಳೆದ ಚುನಾವಣೆಯಲ್ಲಿ ಗೋ ಬ್ಯಾಕ್ ಅಭಿಯಾನ ಮಾಡಿದ್ದರು. ಇವತ್ತು ಅದನ್ನೇ ಮಾಡಲು ಹೊರಟಿದ್ದಾರೆ. ಕೆಲವರು ದುಡ್ಡಿನ ಮದದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ಹೊರ ಹಾಕಿದ್ದಾರೆ‌

ಅವರು ಸೋಮವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ “ಕೆಲವು ಗಂಡಸರಿಗೆ ಅಧಿಕಾರ ನಮ್ಮ ಬಳಿಯೇ ಇರಬೇಕು ಎಂಬ ಭಾವನೆ ಇರುತ್ತೆ. ದರ್ಪದಿಂದ ಇಂತಹ ಕೆಲಸವನ್ನ ಮಾಡಿಸುತ್ತಿದ್ದಾರೆ. ನಾನು ಯಡಿಯೂರಪ್ಪ, ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದಕ್ಕೆಲ್ಲ ಉತ್ತರ ನಾನು ಕೊಡಲ್ಲ, ನಮ್ಮ ಹೈ ಕಮಾಂಡ್ ಕೊಡುತ್ತೆ” ಎಂದು ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಎಲ್ಲವನ್ನೂ ಹೈ ಕಮಾಂಡ್ ಗಮನಿಸಿದೆ. ಸರಿಯಾದ ಉತ್ತರ ನನ್ನ ಹಿರಿಯರು ಕೊಡುತ್ತಾರೆ. ನನ್ನ ಹಿರಿಯರು ನನ್ನ ಪರವಾಗಿ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಪತ್ರ ಯಾರು ಬರೆದು ಯಾರು ಪೋಸ್ಟ್ ಮಡಿದ್ರು ಎಲ್ಲವೂ ಗೊತ್ತಿದೆ. ಕೇಂದ್ರ ಎಲ್ಲವನ್ನೂ ವರದಿ ತರಿಸಿಕೊಂಡಿದೆ. ಇದಕ್ಕೆ ಉತ್ತರ ಕೊಡುತ್ತಾರೆ. ಚುನಾವಣೆಯಲ್ಲಿ ಇಂತಹ ಕೆಲಸಗಳು ನಡೆದಾಗ ಕೇಂದ್ರ ವರದಿಯನ್ನ ತರಿಸಿಕೊಳ್ಳುತ್ತೆ. ಸತ್ಯ ಕೇಂದ್ರಕ್ಕೆ ತಲುಪಿದೆ. ಉತ್ತರ ಅವರೆ ಕೊಡುತ್ತಾರೆ ಎಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

Latest Indian news

Popular Stories