Featured StoryState News

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಲಾಗುತ್ತಿದೆ. ಈ ಸಮತಿಯ ರಾಜ್ಯಾಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ಸಮಿತಿ ರಚಿಸಲಾಗುವುದು. ರಾಜ್ಯ ಮಟ್ಟದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಲಾಗುವುದು. ಉಳಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವ ಧನ ನೀಡಲಾಗುವುದು. ಇದಕ್ಕೆ ವಾರ್ಷ 16 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವ ಶಕ್ತಿ ಯೋಜನೆ, ಮನೆಯ ಒಡತಿಗೆ 2000 ರೂ.ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ, ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button