ಹೊಯ್ಸಳ ಪೊಲೀಸರಿಗೆ ಬಂದೂಕು ಕಡ್ಡಾಯ

ಬೆಂಗಳೂರು, ಮಾರ್ಚ್​ 21: ಬೆಂಗಳೂರಿನಲ್ಲಿ ಗಸ್ತು ಕಾರ್ಯಾಚರಣೆ ನಡೆಸುವ ಹೊಯ್ಸಳ ಪೊಲೀಸ್ (Hoysala Police) ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ಹೊಯ್ಸಳ ತಂಡದ ಎಎಸ್​ಐ ಬಳಿ ಗನ್ ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಯಾವುದೇ ಅಪರಾಧ ಕೃತ್ಯ ಅಥವಾ ಇತರ ಘಟನೆಗಳು ಸಂಭವಿಸಿದಾಗ ಮೊದಲು ಸ್ಥಳಕ್ಕೆ ತಲುಪುವುದು ಹೊಯ್ಸಳ ಸಿಬ್ಬಂದಿ. ಕೃತ್ಯ ನಡೆಯುವ ಸ್ಥಳದಲ್ಲಿ ಆರೋಪಿಗಳ ಕೈಯಲ್ಲಿ ಮಾರಕಸ್ತ್ರಗಳು ಅಥವಾ ಇತರ ಆಯುಧಗಳಿದ್ದರೆ ಅವರನ್ನು ಎದುರಿಸುವುದು ಅಷ್ಟು ಸುಲಭವಲ್ಲ. ಈ ಕಾರಣಕ್ಕೆ ಬಂದೂಕು ಕಡ್ಡಾಯಗೊಳಿಸಲಾಗಿದೆ.

ಘಟನಾ ಸ್ಥಳದಲ್ಲಿರುವ ಆರೋಪಿಗಳ ಬಳಿ ಮಾರಕಾಸ್ತ್ರಗಳಿದ್ದಲ್ಲಿ ಅವರು ಪೊಲೀಸರ ಮೇಲೆ ಕೂಡ ದಾಳಿ ನಡೆಸುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಅವರನ್ನು ಬಂಧಿಸುವುದು ಪೊಲೀಸರಿಗೆ ಸಾಧ್ಯವಾಗದೆ ಹೋಗಬಹುದು. ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರ ಬಳಿ ಆಯುಧಯ ಇರಲೇಬೇಕಾಗುತ್ತದೆ. ಈ ಕಾರಣಕ್ಕೆ ಗನ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸುವೆ.

ಇತ್ತೀಚೆಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಭರಣ ಅಂಗಡಿಯೊಂದರಲ್ಲಿ ದರೋಡೆ ನಡೆದಿತ್ತು. ಆ ಸಂದರ್ಭ ಹೊಯ್ಸಳ ಪೊಲೀಸರು ಮೊದಲು ಸ್ಥಳಕ್ಕೆ ತಲುಪಿದ್ದರು. ಆರೋಪಿಗಳ ಕೈಯಲ್ಲಿ ಮಾರಕಾಸ್ತ್ರಗಳಿದ್ದವು. ಇಂಥ ಸಂದರ್ಭಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಅಟ್ಯಾಕ್ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವ ಹಾಗಿಲ್ಲ. ಈ ಘಟನೆಯು ಪೊಲೀಸ್ ಇಲಾಖೆಯಲ್ಲಿ ಜಾಗೃತಿ ಮೂಡಿಸಲು ಕಾರಣವಾಗಿದೆ. ಪರಿಣಾಮವಾಗಿ ಬಂದೂಕು ಕಡ್ಡಾಯಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.

Latest Indian news

Popular Stories