ಕಲಬುರಗಿಯಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ, “ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಈಶ್ವರಪ್ಪ ಹೇಳಿಕೆಯಂತೆ ಕಾನೂನು ಜಾರಿಗೊಳಿಸಿದರೆ ಬಿಜೆಪಿಯ ಅರ್ಧದಷ್ಟು ಮಂದಿ ಖಾಲಿಯಾಗುತ್ತಾರೆ. ಆರ್‌ಎಸ್‌ಎಸ್ ಬಾಗಿಲು ಮುಚ್ಚಿಕೊಳ್ಳುತ್ತದೆ” ಎಂದು ಲೇವಡಿ ಮಾಡಿದರು.
“ಈಶ್ವರಪ್ಪ ಅವರಿಗೆ ಬಿಜೆಪಿಯವರು ಕಡ್ಡಾಯ ನಿವೃತ್ತಿ ಕೊಟ್ಟಿದ್ದಾರೆ. ಅದಕ್ಕಾಗಿ ಅವರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಾಗಿದೆ. ರಾಜಕೀಯ ಜೀವನ ಮುಗಿದುಹೋಗಿದೆ. ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ” ಎಂದರು.