ಹರೀಶ್ ಪೂಂಜಾಗೆ ಹೈ ಕೋರ್ಟ್ ತರಾಟೆ

ಶಾಸಕರು ಇರುವುದು ಶಾಸನ‌ ರೂಪಿಸಲು, ಅದು ಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ

ಬೆಂಗಳೂರು: ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಅದುಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಹೈಕೋರ್ಟ್ ಶಾಸಕ ಹರೀಶ್ ಪೂಂಜಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ.

ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇಂತಹ ವರ್ತನೆಗಳನ್ನು ಒಪ್ಪಲು ಸಾಧ್ಯವಿಲ್ಲ.

ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಪ್ರಶ್ನಿಸಿದೆ.

Latest Indian news

Popular Stories