ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶದ ನಂತರ ನುಹ್‌ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

ದೆಹಲಿ ಆಗಸ್ಟ್ 07: ಕೋಮು ಘರ್ಷಣೆ (Communal clashes)  ಹಿನ್ನೆಲೆಯಲ್ಲಿ ಹರ್ಯಾಣದ ನುಹ್‌ನಲ್ಲಿ (Nuh) ನಡೆಯುತ್ತಿದ್ದ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ (Punjab and Haryana High Court) ಆದೇಶದ ಮೇರೆಗೆ ಇಂದು (ಸೋಮವಾರ) ಸ್ಥಗಿತಗೊಳಿಸಲಾಗಿದೆ.

ಹೈಕೋರ್ಟ್ ತೀರ್ಪಿನ ನಂತರ ಬುಲ್ಡೋಜರ್ ಕ್ರಮವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿ ಧೀರೇಂದ್ರ ಖಡ್ಗಟಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹರ್ಯಾಣದಲ್ಲಿ ಕೋಮು ಘರ್ಷಣೆಯಲ್ಲಿ 6 ಮಂದಿ ಸಾವಿಗೀಡಾದ ಒಂದು ವಾರದ ನಂತರ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದೆ. ಈ ಹಿಂಸಾಚಾರ ಗುರುಗ್ರಾಮಕ್ಕೂ ಹಬ್ಬಿತ್ತು.

ಬುಲ್ಡೋಜರ್ ಕ್ರಮ ತೆಗೆದುಕೊಂಡಿರುವ ಜಿಲ್ಲಾಡಳಿತ ಕಳೆದ ನಾಲ್ಕು ದಿನಗಳಲ್ಲಿ 350 ಗುಡಿಸಲುಗಳು ಮತ್ತು 50 ಕಟ್ಟಡಗಳನ್ನು ಧ್ವಂಸ ಮಾಡಿದೆ.

ಧ್ವಂಸ ಕಾರ್ಯಾಚರಣೆಯು ಟೀಕೆಗೆ ಒಳಗಾಗಿತ್ತು. ಇದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ರಾಜಕಾರಣಿಗಳು ಆರೋಪಿಸಿದ್ದರು. ಅಲ್ಲದೆ, ಮನೆಗಳನ್ನು ಧ್ವಂಸಗೊಳಿಸಿರುವ ಅನೇಕರು ತಮಗೆ ಯಾವುದೇ ಪೂರ್ವ ಸೂಚನೆ ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ.

Latest Indian news

Popular Stories