ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಕೋರಿ ಸಿದ್ದರಾಮಯ್ಯ ಮೋದಿಗೆ ಪತ್ರ

ಕಲಬುರಗಿ, ಮೇ 23: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಪತ್ರ ಬರೆದಿದ್ದಾರೆ.

ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರವನ್ನು ಹೊಣೆ ಮಾಡಿದ ರಾಜ್ಯ ಸರ್ಕಾರ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಒತ್ತಾಯಿಸಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದರೆ ಪ್ರಜ್ವಲ್ ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿದೇಶದಿಂದ ಪ್ರಜ್ವಲ್‌ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೂಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿ ಮೂಲಕವೂ ಕ್ರಮಕೈಗೊಳ್ಳಬೇಕು. ಪ್ರಜಲ್ವ್ ಪಾಸ್‌ಪೋರ್ಟ್‌ ರದ್ದುಪಡಿಸಬೇಕು ಎಂದು ಮೇ ಮೊದಲ ವಾರ ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದರು. ಆದರೆ, ಈ ಪತ್ರಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.Latest Indian news

Popular Stories