ವಿವಾದಕ್ಕೆ ಕಾರಣವಾದ ತರಗತಿಯ ಘಟನೆ:ಪ್ರಾಥಮಿಕ ಶಾಲೆಯೊಂದರ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯಲು ಹಿಂದೂ ವಿದ್ಯಾರ್ಥಿಗಳಿಗೆ ಪ್ರಚೋದಿಸಿದ ಶಿಕ್ಷಕಿ – ಆರೋಪದ ವೀಡಿಯೋ ವೈರಲ್!

ಮುಜಾಫರ್‌ನಗರ: ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ಶಿಕ್ಷಕರೊಬ್ಬರು ತರಗತಿಯೊಳಗೆ ಹಿಂಸಾಚಾರವನ್ನು ಪ್ರೋತ್ಸಾಹಿಸುದರೊಂದಿಗೆ ಧಾರ್ಮಿಕ ಅಸಹಿಷ್ಣುತೆಯನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶದ ಮುಜಾಫರ್‌ನಗರದ ಖುಬ್ಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಿಂದ ವರದಿಯಾಗಿರುವ ವೀಡಿಯೊವೊಂದರಲ್ಲಿ ತ್ರಿಪ್ತ ತ್ಯಾಗಿ ಎಂದು ಗುರುತಿಸಲಾದ ಶಿಕ್ಷಕರೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯಲು ಹಿಂದೂ ವಿದ್ಯಾರ್ಥಿಗಳಿಗೆ ಸೂಚನೆ ನೀಡುತ್ತಿರುವುದು ಕಂಡು ಬಂದಿದೆ.

ಟ್ವಿಟರ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಈ ವೀಡಿಯೋ ಹಂಚಿಕೊಳ್ಳಲಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಆಪಾದಿತ ಘಟನೆಯು ಧಾರ್ಮಿಕ ಸಾಮರಸ್ಯ ಮತ್ತು ಶಾಲೆಗಳಲ್ಲಿನ ಸೌಹರ್ದತೆಗೆ ಧಕ್ಕೆ ತಂದಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ತ್ರಿಪ್ತಾ ತ್ಯಾಗಿ ಹಿಂದೂ ವಿದ್ಯಾರ್ಥಿಗಳಿಗೆ ಮುಸ್ಲಿಂ ವಿದ್ಯಾರ್ಥಿಯೊಬ್ಬನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವಂತೆ ಸೂಚನೆ ನೀಡುತ್ತಿರುವ ಆತಂಕಕಾರಿ ಸಂವಾದ ವೀಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳು ವಿವಿಧ ವಲಯಗಳಿಂದ ಖಂಡನೆಗೆ ಕಾರಣವಾಗಿದ್ದು, ಅನೇಕ ವ್ಯಕ್ತಿಗಳು, ಸಂಘಟನೆಗಳು ಶಿಕ್ಷಕಿ ವಿರುದ್ಧ ತಕ್ಷಣದ ಕ್ರಮ ಕೈಗೊಳ್ಳಲು ಮತ್ತು ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಒತ್ತಾಯಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಈ ವೀಡಿಯೊದ ಸತ್ಯಾಸತ್ಯತೆ, ಘಟನೆಯ ಸುತ್ತಲಿನ ಸಂದರ್ಭಗಳನ್ನು ಖಚಿತಪಡಿಸಿಕೊಳ್ಳಲು ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಆರೋಪದ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತನಿಖೆ ಮುಗಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರಮುಖ ಸಾಮಾಜಿಕ ಕಾರ್ಯಕರ್ತರು, ಶಿಕ್ಷಣ ತಜ್ಞರು ಮತ್ತು ಸಮುದಾಯದ ಮುಖಂಡರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೋಮು ಸೌಹಾರ್ದತೆ ಮತ್ತು ಸಹಿಷ್ಣುತೆಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಬೇಕಿದೆ.

ಅಲ್ತಮಶ್ ಎಂಬ ಮುಸ್ಲಿಂ ವಿದ್ಯಾರ್ಥಿಯ ತಂದೆ ಇರ್ಷಾದ್ ಘಟನೆಯ ಕುರಿತು ತಮ್ಮ ನೋವು ತೋಡಿಕೊಂಡಿದ್ದು, ಮಗನನ್ನು ಮರಳಿ ಆ ಶಾಲೆಗೆ ಕಳುಹಿಸದಿರಲು ನಿರ್ಧರಿಸಿದ್ದಾರೆ. ಪೊಲೀಸರ ಮುಂದೆ ಶಿಕ್ಷಕಿ ಕ್ಷಮೆ ಯಾಚಿಸಿದ್ದಾರೆ ಎಂದು ಇರ್ಷಾದ್ ಉಲ್ಲೇಖಿಸಿದ್ದಾರೆ. ಶಿಕ್ಷಕಿ ಮುಜಫರ್‌ನಗರ ಪೊಲೀಸರಿಗೆ ಲಿಖಿತ ಹೇಳಿಕೆಯನ್ನೂ ನೀಡಿದ್ದು, ಆತನ ವಿರುದ್ಧ ದೂರು ದಾಖಲಿಸಬಾರದು ಎಂದು ವಿನಂತಿಸಿದ್ದಾರೆ.

ವೀಡಿಯೋ:


Latest Indian news

Popular Stories