
Featured StoryState News
ವಿವಾದಿತ ಪ್ರದೇಶದಲ್ಲಿ ರಾಮ ಫೋಟೋಗೆ ಪೂಜೆ: ಐವರನ್ನು ವಶಕ್ಕೆ ಪಡೆದ ಪೊಲೀಸರು
ಹಾವೇರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ.
ಹಾವೇರಿಯ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ವಿವಾದಿತ ಜಾಗದಲ್ಲಿ ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು ಈ ಸಂಬಂಧ ತಾಲೂಕು ಸಂಚಾಲಕ ಗಂಗಾಧರ್ ಶೆಟ್ಟರ್, ಸೋಮಶೇಖರ್ ಗೌರಿಮಠ, ಈರಣ್ಣ ಬಳೇಗಾರ, ಮೋಹನ್ ಮೀರಜಕರ್ ಸೇರಿ ಐವರನ್ನು ಬಂಕಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಹಾವೇರಿ ಎಸ್.ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಳಿಕ ಶ್ರೀರಾಮನ ಭಾವಚಿತ್ರವನ್ನು ತೆಗೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಾವೇರಿ ಎಸ್ಪಿ ಹೇಳಿದರು.




