ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡಿ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ನಿಶಕ್ತಿ ಕಾರಣದಿಂದ ಕುಮಾರ ಸ್ವಾಮಿಯವರು ಮುಂಜಾನೆ 3.40 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದು ಅವರ ಆರೋಗ್ಯ ಸ್ಥಿರವಾಗಿದೆಯೆಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.