ಎಚ್‌ ಡಿ ರೇವಣ್ಣರಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಫಿಕ್ಸ್!

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌ ಡಿ ರೇವಣ್ಣರಿಗೆ ನ್ಯಾಯಾಲಯವು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಕಸ್ಟಡಿಗೆ ಮೇ 8ರವರೆಗೆ ನೀಡಲಾಗಿತ್ತು. ಇಂದು ಮತ್ತೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಿದಾಗ, ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದ್ದರು. ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.

Latest Indian news

Popular Stories