ಹೆಚ್​ಡಿ ರೇವಣ್ಣ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ!

ಬೆಂಗಳೂರು, (ಮೇ 05): ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣಕ್ಕೆ (Woman Kidnap Case) ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ (HD Revanna) ಅವರಿಗೆ ಕೋರ್ಟ್ ಐದು ದಿನ ಎಸ್​ಐಟಿ ಕಸ್ಟಡಿಗೆ ನೀಡಿದೆ. ನಿನ್ನೆ (ಮೇ 04) ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಎಚ್​ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಪದ್ಮನಾಭನಗರ ನಿವಾಸಕ್ಕೆ ತೆರಳಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಎಸ್​ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ವಿಚಾರಣೆ ಮಾಡಿದ್ದು, ಇದೀಗ ಇಂದು (ಮೇ 05) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯ್ತು. ಇವತ್ತು ಭಾನುವಾರ ಆಗಿದ್ದರಿಂದ ಕೋರಮಂಗದಲ್ಲಿರುವ ನಿವಾಸದಲ್ಲೇ 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ​ ಮುಂದೆ ಹಾಜರುಪಡಿಸಿದರು.

ಈ ವೇಳೆ ನ್ಯಾಯಾಧೀಶರು ಆರೋಪ ರೇವಣ್ಣ ಅವರನ್ನು ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಪ್ರತಿ ದಿನ 9.30 ರಿಂದ 10.30 ರ ವರೆಗೂ ಲಾಯರ್ ಬೇಟಿಗೆ ಅವಕಾಶ ನೀಡಲಾಗಿದೆ. ಹಾಗೆ ಉತ್ತಮ ಆಹಾರ ವ್ಯವಸ್ಥೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

Latest Indian news

Popular Stories