ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ: ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ.

ಆಹ್ವಾನ ಕೊಟ್ಟರು, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ಎನ್​ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ ಅವರು ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಬಿಜೆಪಿಯ ಎನ್.ಡಿ.ಎ ಮೈತ್ರಿಕೂಟ ಸೇರುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ. ಇನ್ನು ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕನಾಗಿ ಕುಮಾರ ಸ್ವಾಮಿ ಆಯ್ಕೆಯಾಗುವ ಸಾಧ್ಯತೆ ಇದೆ.

Latest Indian news

Popular Stories