ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂಗಾರು ಮತ್ತೆ ಚುರುಕಾಗಲಿದ್ದು, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಕೊಟ್ಟಿಗೆಹಾರ, ಕೊಲ್ಲೂರು, ಅಂಕೋಲ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಲೋಂಡಾ, ಧರ್ಮಸ್ಥಳ, ಸಿದ್ದಾಪುರ, ಗೇರುಸೊಪ್ಪ, ಕುಮಟಾ, ಬನವಾಸಿ, ಮಂಚಿಕೇರಿ, ಜೋಯ್ಡಾ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಸಕಲೇಶಪುರ, ಬೆಳಗಾವಿ ನಗರ, ಮಂಡಗದ್ದೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ.