ಸೆಪ್ಟೆಂಬರ್ 16ರವರೆಗೆ ಭಾರೀ ಮಳೆಯಾಗಲಿದೆ – ಹವಾಮಾನ ಇಲಾಖೆ

ಸೆಪ್ಟೆಂಬರ್ 16ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಹಲವೆಡೆ ನಿನ್ನೆ ರಾತ್ರಿ ಮಳೆ ಅಬ್ಬರಿಸಿದ್ದು, ಇಂದು ಸಹ ಭಾರೀ ಮಳೆಯಾಗಬಹುದು. ಅಲ್ಲದೇ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತೆ ಎಂದು ಹವಾಮಾನಇಲಾಖೆ ವರದಿಯಲ್ಲಿ ತಿಳಿಸಿದೆ.ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆ ಸಾಧ್ಯತೆ ಇದೆಯಂತೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತದೆ.

Latest Indian news

Popular Stories