ಭಾರೀ ಮಳೆ: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

Latest Indian news

Popular Stories