ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ

ಬಿಸಿಲಿಗೆ ಕಾದು ಕೆಂಡದಂತಾಗಿದ್ದ ಬೆಂಗಳೂರಿಗೆ ಮಳೆ(Rain)ಯ ಸಿಂಚನವಾಗಿದೆ, ಸೋಮವಾರ ಗಂಟೆಗಟ್ಟಲೆ ಮಳೆ ಸುರಿದಿದೆ. ಇಂದು ಕೂಡ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆ ಶುರುವಾಗಲಿದೆ.ಮೇ 13ರವರೆಗೂ ಮಳೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 44.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಮತ್ತು ನಾಳೆ ಚಾಮರಾಜನಗರ ಹಾಗೂ ರಾಮನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಮದೆರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಪ್ರದೇಶಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Latest Indian news

Popular Stories