ರಾಜೀನಾಮೆ ನೀಡಿದ ಹೈಕೋರ್ಟ್ ಜಡ್ಜ್ ಗಂಗೋಪಾಧ್ಯಾಯ; ಬಿಜೆಪಿ ಪಕ್ಷದಿಂದ ರಾಜಕೀಯ ಪ್ರವೇಶ ಸಾಧ್ಯತೆ

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್ ನ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ಅವರು ರಾಜೀನಾಮೆ ಪತ್ರದ ಪ್ರತಿಗಳನ್ನು ಸಿಜೆಐ ಡಿವೈ ಚಂದ್ರಚೂಡ್, ಕೋಲ್ಕತ್ತಾ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿದೆ.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಇಂದು ಮುಂಜಾನೆ ಹೈಕೋರ್ಟ್‌ನ ತಮ್ಮ ಚೇಂಬರ್‌ಗೆ ಆಗಮಿಸಿದರು, ನಂತರ ಅವರ ರಾಜೀನಾಮೆ ಪತ್ರವನ್ನು ಕಳುಹಿಸಲಾಯಿತು.
ಅವರು ಇಂದು ಪತ್ರಿಕಾಗೋಷ್ಠಿ ಕರೆದಿದ್ದು, ಅವರ ಮುಂದಿನ ನಿರ್ಧಾರದ ಬಗ್ಗೆ ತಿಳಿಸಬಹುದು.

ಗಂಗೋಪಾಧ್ಯಾಯ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಟಿಕೆಟ್‌ ನಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿವೆ. ತಮ್ಲುಕ್ ಕ್ಷೇತ್ರವು ಇತ್ತೀಚಿನ ಚುನಾವಣೆಗಳಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ.

Latest Indian news

Popular Stories