ರೈತನೋರ್ವ ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ಆತನನ್ನು ಮಾಲ್ ಒಳಗೆ ಎಂಟ್ರಿ ಕೊಟ್ಟಿರಲಿಲ್ಲ. ಆದರೆ ಇಂದು ಅದೇ ಮಾಲ್ನ ಸಿಬ್ಬಂದಿ ರೈತನನ್ನು ಕರೆಸಿ ಸನ್ಮಾನ ಮಾಡಿದ್ದಾರೆ. ಬೆಂಗಳೂರಿನ ಜಿಟಿ ಮಾಲ್ಗೆ ರೈತ ಫಕೀರಪ್ಪ ಪಂಚ ಧರಿಸಿಕೊಂಡು ಬಂದು ಸನ್ಮಾನ ಸ್ವೀಕರಿಸಿದ್ದಾರೆ. ಅಂಬಾನಿ ಮಗನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದ ಸೌಥ್ ಸ್ಟಾರ್ ನಟರೇ ಪಂಚೆಯಲ್ಲಿ ಮಿಂಚಿದ್ದರು. ಆದರೆ ಇಲ್ಲಿ ಮಾಲ್ಗೆ ಪಂಚೆಯಲ್ಲಿ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ಗೆ (GT Mall) ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಫಕೀರಪ್ಪ ಎಂಬ ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ ಈಗ ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ಮಾಲ್ನಿಂದಲೇ ಸನ್ಮಾನ ಮಾಡಲಾಗಿದೆ. ರೈತ ಫಕೀರಪ್ಪಗೆ ಶಾಲು ಹಾಕಿ ಸನ್ಮಾನಿಸಲಾಗಿದೆ. ಮಾಲ್ ಇನ್ಚಾರ್ಜ್ ಸುರೇಶ್ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.
ರೈತ ಫಕೀರಪ್ಪ ಪಂಚೆ ಧರಿಸಿ ಮಾಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರೈತನನ್ನು ಅವಮಾನಿಸಿದಕ್ಕೆ ಕನ್ನಡಪರ ಹೋರಾಟಗಾರರು ಮಾಲ್ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾಲ್ ಇನ್ಚಾರ್ಜ್ ಸುರೇಶ್ ಕ್ಷಮೆ ಕೇಳಿದರೂ ಹೋರಾಟಗಾರರು ಜಗ್ಗಲಿಲ್ಲ. ಮ್ಯಾನೇಜರ್ ಬರಬೇಕು ಎಂದು ಪಟ್ಟು ಹಿಡಿದಿದ್ದರು. ಸದ್ಯ ಈಗ ಮಾಲ್ ಸಿಬ್ಬಂದಿ ತಾವು ಮಾಡಿದ ಎಡವಟ್ಟನ್ನು ಸರಿ ಮಾಡಿಕೊಂಡಿದ್ದು ಪಂಚೆಯಲ್ಲೇ ಬಂದ ರೈತ ಫಕೀರಪ್ಪನಿಗೆ ಮಾಲ್ ಒಳಗೆ ಸನ್ಮಾನ ಮಾಡಿ ಕ್ಷಮೆ ಕೇಳಿದೆ.
ಇನ್ನು ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್ಸೆಟ್. ಜಿ.ಟಿ.ಮಾಲ್ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.
ನಿನ್ನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿತ್ತು. ಅದ್ರಲ್ಲಿ ಫಕೀರಪ್ಪ ಎಂಬ ವೃದ್ಧರೊಬ್ಬರು ಪಂಚೆ ಧರಿಸಿ ಬಂದಿದ್ರು. ಪಂಚೆ ಧರಿಸಿದ್ದಾರೆ ಎಂಬ ಏಕಮಾತ್ರ ಕಾರಣಕ್ಕೆ ಜಿ.ಟಿ.ಮಾಲ್ನ ಸೆಕ್ಯೂರಿಟಿ ಪ್ರವೇಶಕ್ಕೆ ನಿರಾಕರಣೆ ಮಾಡಿದ್ದರು.
ವೃದ್ಧನನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದರು. ಇದ್ರಿಂದ ತೀವ್ರ ಅವಮಾನಕ್ಕೊಳಗಾದ ಫಕೀರಪ್ಪನವರ ಪುತ್ರ ನಾಗರಾಜ್ ಮಾಲ್ನವರಿಗೆ ಒಳಗೆ ಬಿಡುವಂತೆ ರಿಕ್ವೆಸ್ಟ್ ಮಾಡಿದ್ದಾರೆ. ಆದ್ರೆ ಮಾಲ್ನವನು ಯಾವಾಗ ಪ್ರವೇಶವನ್ನು ನೀರಾಕರಣೆ ಮಾಡಿದ್ನೋ ನಾಗರಾಜ್ ವಿಡಿಯೋ ಮಾಡಿ ತಮ್ಮ ನೋವು ತೋಡಿಕೊಂಡಿದ್ರು. ಸದ್ಯ ಈಗ ಫಕೀರಪ್ಪರನ್ನು ಸನ್ಮಾನ ಮಾಡಿ ಗೌರವಿಸಲಾಗಿದೆ.