ಚಂಡಮಾರುತ ಎಫೆಕ್ಟ್ | ಮುಂದಿನ ನಾಲ್ಕೈದು ದಿನ ಭಾರೀ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯ ಮುನ್ಸೂಚನೆ

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ ಉತ್ತರ ಮತ್ತು ದಕ್ಷಿಣದಿಂದ ಪಶ್ಚಿಮ ಭಾಗದವರೆಗೆ ಬಿಸಿ ಶಾಖದ ಅನುಭವವಾಗುತ್ತಿದೆ. ಈತನ್ಮಧ್ಯೆ ಕೆಲ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ಸಿಕ್ಕಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಪ್ರದೇಶದಲ್ಲಿ ಏಪ್ರಿಲ್ 30 ರಿಂದ ಮೇ 2 ರವರೆಗೆ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಹಿಮಪಾತ ಉಂಟಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ 4-5 ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಚಂಡಮಾರುತ ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇತ್ತ, ಇಂದು ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಗುಡುಗು/ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯು ಮುಂದುವರಿಯುವ ನಿರೀಕ್ಷೆಯಿದೆ.

ಇದಲ್ಲದೇ ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮುಂದಿನ 5 ದಿನಗಳ ಕಾಲ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ನಾಲ್ಕನೇ ದಿನ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, ಇದು ಭೂಕುಸಿತದ ಸಾಧ್ಯತೆಯನ್ನು ಹೆಚ್ಚಿಸಲಿದೆ.

ಸ್ಕೈಮೆಟ್ ಹವಾಮಾನದ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಉತ್ತರಾಖಂಡದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತದಲ್ಲಿ ಅಲ್ಲಲ್ಲಿ ಲಘು ಮಳೆಯೊಂದಿಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು.

ವಿದರ್ಭ, ಮರಾಠವಾಡ, ತೆಲಂಗಾಣ, ಛತ್ತೀಸ್‌ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್‌ನ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾದ ಆಲಿಕಲ್ಲು ಮಳೆಯೊಂದಿಗೆ ಲಘುವಾಗಿ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ದೇಶದ ಹಲವು ಭಾಗಗಳಲ್ಲಿ ಇಂದು ಅತ್ಯಂತ ಬಿಸಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪೂರ್ವ ಭಾರತದಲ್ಲಿ ಮೇ 1 ರವರೆಗೆ ತೀವ್ರ ಶಾಖದ ಅಲೆಗಳು ಮುಂದುವರಿಯುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 5 ದಿನಗಳಲ್ಲಿ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ. ತೀವ್ರ ಬಿಸಿಗಾಳಿ ಹೆಚ್ಚುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಬಿಹಾರ, ಬಂಗಾಳ ಮತ್ತು ಒಡಿಶಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಪೆನಿನ್ಸುಲರ್ ಭಾರತದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲೂ ಬಿಸಿಗಾಳಿಯ ಬಗ್ಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Latest Indian news

Popular Stories