ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ಲುತ್ತೇನೆ: ಸಂಸದೆ ಶೋಭಾ ಕರಂದ್ಲಾಜೆ

ವಿಜಯಪುರ: 17ನೆಯ ಲೋಕಸಭೆಗಾಗಿ ನಾಳೆ ಅಥವಾ ನಾಡಿದ್ದು ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆಯಿದೆ. ಅದರ ಜೊತೆಜೊತೆಗೆ ಆಡಳಿತಾರೂಢ ಬಿಜೆಪಿ ಪಕ್ಷವು ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಾ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕ್ಷೇತ್ರದಲ್ಲಿ ಗೊಂದಲವಿದೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲೋ ಕ್ಷೇತ್ರ ಹಾಗಾಗಿ ಬೇಡಿಕೆಯಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿನ ಜನರು ‌ನನ್ನನ್ನು ಎರಡು ಬಾರಿ ಗೆಲ್ಲಿಸಿದ್ದಾರೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಮಾಡಿದ್ದೇನೆ. ಗೋ ಬ್ಯಾಕ್​ ಅನ್ನುವುದು ಶೋಭಾಯಮಾನವಲ್ಲ, ನಾನು ಪಕ್ಷಕ್ಕಾಗಿ ತಳಮಟ್ಟದಿಂದ ದುಡ್ಡಿದಿದ್ದೇನೆ, ಕ್ಯಾಬಿನೆಟ್​​ನಲ್ಲಿ ಸೇವೆ ಸಲ್ಲಿಸಿದ್ದೇನೆ, ಒಟ್ಟಿನಲ್ಲಿ ಬಿಜೆಪಿಗಾಗಿ ನನ್ನನ್ನೇ ಅರ್ಪಿಸಿಕೊಂಡಿದ್ದೇನೆ. ಹೀಗಿರುವಾಗ ನನ್ನನ್ನು ಗೋ ಬ್ಯಾಕ್ ಎನ್ನುವುದು ಸರ್ವತಾಸಾಧುವಲ್ಲ ಎಂದಿದ್ದಾರೆ.

ಬೇರೆಯವರು ಟಿಕೆಟ್ ಕೇಳಿದ್ದು ತಪ್ಪಲ್ಲ, ಆದ್ರೆ ಹಾಲಿ ಸಂಸದೆಯಾಗಿ ನನಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಹೊರಗಿನವರು ಬಂದು ಗೋಬ್ಯಾಕ್​ ಅಭಿಯಾನ ಮಾಡುತ್ತಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ? ‌ನಾನು ವಿಚಲಿತಳಾಗಿಲ್ಲ, ನಮ್ಮ ಕಾರ್ಯಕರ್ತರು ಸಹ ವಿಚಲಿತರಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Latest Indian news

Popular Stories