ಎಲ್ಲಾ ಸಮಾರಂಭಗಳಲ್ಲಿಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರ ಇರಿಸುವುದು ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಸೇರಿದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರ ಇರಿಸುವುದನ್ನು ಕಡ್ಡಾಯಗೊಳಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.


ಇದೊಂದು ಅತ್ಯುತ್ತಮ ನಿರ್ಧಾರ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಕೆಲ ಸರ್ಕಾರಿ ಕಾರ್ಯಕ್ರಮಗಳಲ್ಲಿ , ಜ.26 ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ನಿರ್ಲಕ್ಷ್ಯ ಮಾಡಲಾಗುತ್ತಿತ್ತು. ಅಂಥ ಅಹಂಕಾರಿ ಮತ್ತು ಅಜ್ಞಾನಿಗಳಿಗೆ ಸಂವಿಧಾನ ಮತ್ತು ಸಂವಿಧಾನ ಬರೆದ ಅಂಬೇಡ್ಕರ್ ಮಹತ್ವ ತಿಳಿಸಿ ಕೊಡುವ ದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂಬ ಮಾತು ಕೇಳಿ ಬರತೊಡಗಿದೆ.
…..

Latest Indian news

Popular Stories