ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉದ್ಯೋಗಿಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಅವರನ್ನು ಮೀರತ್‌ನಲ್ಲಿ ಬಂಧಿಸಲಾಯಿತು. ಬಂಧಿತ ವ್ಯಕ್ತಿಯನ್ನು ಸತೇಂದ್ರ ಸಿವಾಲ್ ಎಂದು ಗುರುತಿಸಲಾಗಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಐಎಸ್‌ಐ ಹ್ಯಾಂಡ್ಲರ್‌ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳಿಗೆ ಆಮಿಷ ಒಡ್ಡುತ್ತಿದ್ದಾರೆ ಮತ್ತು ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗೆ ಬದಲಾಗಿ ಹಣಕಾಸಿನ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ಗುಪ್ತಚರ ಮೂಲಗಳಿಂದ ಎಟಿಎಸ್ ತಿಳಿದು ಬಂದಿದೆ. ವಿನಿಮಯವಾಗುತ್ತಿರುವ ಮಾಹಿತಿಯು ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ಗಂಭೀರ ಬೆದರಿಕೆಯನ್ನು ಒಡ್ಡಿದೆ ಎಂದು ಸಂಸ್ಥೆ ತಿಳಿಸಿದೆ.
ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ತನ್ನ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಗೌಪ್ಯ ದಾಖಲೆಗಳನ್ನು ಹೊರತೆಗೆಯುತ್ತಿದ್ದ ಎನ್ನಲಾಗಿದೆ.
ಹಣಕ್ಕಾಗಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಸೇನಾ ಸಂಸ್ಥೆಗಳ ಕಾರ್ಯತಂತ್ರದ ಚಟುವಟಿಕೆಗಳಿಗೆ ಸಂಬಂಧಿಸಿದ ನಿರ್ಣಾಯಕ ಮಾಹಿತಿಯನ್ನು ISI ಹ್ಯಾಂಡ್ಲರ್‌ಗಳಿಗೆ ರವಾನಿಸಿದ್ದ ಎನ್ನಲಾಗಿದೆ.
ಸತೇಂದ್ರ ಸಿವಾಲ್ ಅವರು 2021 ರಿಂದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕರಾಗಿ (IBSA) ಕೆಲಸ ಮಾಡುತ್ತಿದ್ದಾರೆ.