ನವ ದೆಹಲಿ: ಗುರುವಾರ ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಈ ವರ್ಷದ ನಾಲ್ಕನೇ ಘಟನೆಯಾಗಿದೆ.
19 ವರ್ಷದ ಶ್ರೇಯಸ್ ರೆಡ್ಡಿ ಬೆನಿಗರ್ ಓಹಿಯೋದ ಲಿಂಡರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವಿದ್ಯಾರ್ಥಿಯಾಗಿದ್ದರು. ಶ್ರೇಯಸ್‌ನ ಪೋಷಕರು ಹೈದರಾಬಾದ್‌ನಲ್ಲಿ ವಾಸಿಸುತ್ತಾರೆ. ಆದರೆ ಅವರು ಅಮೆರಿಕನ್ ಪಾಸ್‌ಪೋರ್ಟ್ ಹೊಂದಿದ್ದರು ಎಂದು ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ.
ಪ್ರಕರಣದಲ್ಲಿ ಯಾವುದೇ ದ್ವೇಷ ಅಪರಾಧದ ಸಾಧ್ಯತೆಯನ್ನು ಅಧಿಕಾರಿಗಳು ತಳ್ಳಿಹಾಕಿದ್ದಾರೆ.
ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಮಿಷನ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದೆ. ಸಾವಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.