ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ಭೇಟಿಯಾದ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್

ತೀವ್ರ ಪ್ರತಿಭಟನೆಗಳ ನಡುವೆ ರಾಜೀನಾಮೆ ನೀಡಿದ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೋಮವಾರ ಢಾಕಾದಿಂದ ಹೊರಟು ದೆಹಲಿ ಬಳಿಯ ಹಿಂಡನ್ ಏರ್ ಬೇಸ್‌ಗೆ ಬಂದಿಳಿದರು. ಇದೀಗ ಅವರನ್ನು ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭೇಟಿಯಾಗಿ ‌ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಝಮಾನ್ ಅವರು ಮಧ್ಯಂತರ ಸರ್ಕಾರವನ್ನು ರಚಿಸಲಾಗುತ್ತಿದೆ ಎಂದು ಘೋಷಿಸಿದರು. ಹಿಂಸಾಚಾರವನ್ನು ಕೊನೆಗೊಳಿಸುವಂತೆ ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಸೇನಾ ಹೆಲಿಕಾಪ್ಟರ್‌ನಲ್ಲಿ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಹಸೀನಾ ಅವರ ವೈಯಕ್ತಿಕ ಸಹಾಯಕ ಅಲ್ ಜಜೀರಾಗೆ ತಿಳಿಸಿದ್ದಾರೆ. 

“ಅವರು ಮತ್ತು ಆಕೆಯ ಸಹೋದರಿ ಗಾನಭಬನ್ (ಪ್ರಧಾನಿಯವರ ಅಧಿಕೃತ ನಿವಾಸ) ಅನ್ನು ತೊರೆದು ಸುರಕ್ಷಿತ ಸ್ಥಳಕ್ಕೆ ಹೊರಟಿದ್ದಾರೆ” ಎಂದು ಬಾಂಗ್ಲಾದೇಶದ ಪ್ರಧಾನ ಮಂತ್ರಿಯ ಹಿರಿಯ ಸಲಹೆಗಾರರೊಬ್ಬರು ಅನಾಮಧೇಯತೆಯ ಷರತ್ತಿನ ಮೇಲೆ ಹೇಳಿದ್ದಾರೆ.

Latest Indian news

Popular Stories