ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತ್ಯು: ಇರಾನ್ ನ್ಯೂಸ್ ವರದಿಗಳು

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರು ತಮ್ಮ ಹೆಲಿಕಾಪ್ಟರ್ ಭಾರೀ ಮಂಜಿನಲ್ಲಿ ಪರ್ವತ ಭೂಪ್ರದೇಶವನ್ನು ದಾಟುತ್ತಿದ್ದಾಗ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

“ಪತನವಾದ ಹೆಲಿಕಾಪ್ಟರ್’ನಲ್ಲಿದ್ದ ಪ್ರಯಾಣಿಕರು ಇನ್ನೂ ಜೀವಂತವಾಗಿರುವ ಯಾವುದೇ ಲಕ್ಷಣಗಳಿಲ್ಲ” ಎಂದು ರಾಜ್ಯ ಟಿವಿ ವರದಿ ಮಾಡಿದೆ.

ಇರಾನ್ ಅಧ್ಯಕ್ಷ ಮತ್ತು ಅಜೆರ್ಬೈಜಾನಿ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರು ಗಡಿಯಲ್ಲಿ ಕ್ವಿಜ್ ಕಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ ರೈಸಿ ಅವರು ಇರಾನಿನ ನಗರವಾದ ತಬ್ರಿಜ್‌ಗೆ ಹಿಂದಿರುಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇರಾನ್ ಪಡೆಗಳಿಗಳಿಂದ ಸಮರೋಪಾದದಿಯಲ್ಲಿ ರಕ್ಷಣಾ ಕಾರ್ಯ ಆರಂಭಿಸಿತ್ತು. ಮಂಜಿನ ಕಾರಣಕ್ಕೆ ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಯಾಗಿತ್ತು. ಇದೀಗ ಇರಾನ್ ಅಧ್ಯಕ್ಷರು‌ಮೃತ ಪಟ್ಟಿರುವ ಸುದ್ದಿ ಕೇಳಿ ಬರುತ್ತಿದೆ.

Latest Indian news

Popular Stories