ಬೆಂಗಳೂರು: ಕಾಂಗ್ರೆಸ್ ಸೇರಿದ ಮೇಲೆ ಶೆಟ್ಟರ್ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದು ನನಗೆ ಬಿಜೆಪಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣವೆಂದು ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ಕ್ಷೇತ್ರದ ಟಿಕೆಟ್ ಘೋಷಣೆಯವರೆಗೆ ಸುಮ್ಮನಿದ್ದೆ. ಸ್ಕೃನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಬಿ.ಎಲ್ ಸಂತೋಷ್ ನನ್ನ ಟಿಕೆಟ್ ತಪ್ಪಿಸಿದರು ಎಂದು ಹೇಳಿದ್ದಾರೆ. ನನ್ನಟಿಕೆಟ್ ತಪ್ಪಲು ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕಾರಣ ಎಂದು ಶೆಟ್ಟರ್ ಹೇಳಿದ್ದಾರೆ.
ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.
ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ ಎಂದು ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.