ಜಮ್ಮು ಮತ್ತು ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮಾಹಿತಿ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

370 ನೇ ವಿಧಿಯನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆಗಳು ಕೇಂದ್ರ ಸರಕಾರದಿಂದ ಕೇಳಿ ಬಂದಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಭಜನೆಯ ಅಗತ್ಯವಿದೆ ಎಂದು ಕೇಂದ್ರವು ಈ ಹಿಂದೆ ವಾದಿಸಿತ್ತು.

ಆಗಸ್ಟ್ 5, 2019 ರಂದು, ಕೇಂದ್ರವು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರವನ್ನು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತ್ತು.

Latest Indian news

Popular Stories