ಇಂದು ಜಯ ಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ

ಉಡುಪಿ, ಮಾ.12: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜೆ.ಪಿ.ಹೆಗಡೆ ಅವರು ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರವನ್ನು ಅಧಿಕೃತ ಹೇಳಿಕೆಯಲ್ಲಿ ದೃಢಪಡಿಸಿದ್ದಾರೆ.

ಮಾರ್ಚ್ 12 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.

ಹೆಗ್ಗಡೆಯವರು ತಮ್ಮ ಅಧಿಕೃತ ಹೇಳಿಕೆಯಲ್ಲಿ, “ನನ್ನ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ನನಗೆ ಯಾವಾಗಲೂ ಮಾರ್ಗದರ್ಶನ ಮತ್ತು ಬೆಂಬಲ ನೀಡಿದ ನಿಮ್ಮೆಲ್ಲರಿಗೂ ನಾನು ಋಣಿಯಾಗಿದ್ದೇನೆ. ನಾನು ಈ ವಿಷಯವನ್ನು ನಿಮ್ಮೊಂದಿಗೆ ಚರ್ಚಿಸಿದ್ದೇನೆ ಮತ್ತು ನನ್ನ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದೇನೆ. ಕರಾವಳಿ ಕರ್ನಾಟಕದ ಅಭಿವೃದ್ಧಿಗಾಗಿ ರಾಜಕೀಯದಲ್ಲಿ ಸಕ್ರಿಯರಾಗಲು ಸಂಕಲ್ಪ ಮಾಡಿದ್ದೇನೆ.

ಅದರಂತೆ ಮಾರ್ಚ್ 12ರ ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ. ನಾನು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದೇನೆ ಮತ್ತು ನನ್ನ ಮುಂದಿನ ರಾಜಕೀಯ ನಡೆ ನಿರ್ಧರಿಸಿದ್ದೇನೆ.

“ನನ್ನೊಂದಿಗೆ ಇದ್ದ ನೀವೆಲ್ಲರೂ ಮಾರ್ಚ್ 12 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ (ಕ್ವೀನ್ಸ್ ರೋಡ್) ನನ್ನೊಂದಿಗೆ ಸೇರಬೇಕೆಂದು ನಾನು ವಿನಂತಿಸುತ್ತೇನೆ. ನನಗೆ ಮಾರ್ಗದರ್ಶನ ನೀಡಲು ಮತ್ತು ನಿಮ್ಮ ಸಂಪೂರ್ಣ ಸಹಕಾರವನ್ನು ನೀಡುವಂತೆ ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ” ಎಂದು ಅವರು ಹೇಳಿದರು.

 

Latest Indian news

Popular Stories