ಜಯನಗರ ಮತ ಎಣಿಕೆ ಗೊಂದಲಕ್ಕೆ ತೆರೆ: 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು!

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ, ಫಲಿತಾಂಶ ಗೊಂದಲಕ್ಕೆ ತೆರೆ ಬಿದ್ದಿದ್ದು, ಅಧಿಕೃತ ಫಲಿತಾಂಶ ಪ್ರಕಟಗೊಂಡಿದೆ. 

ಬೆಂಗಳೂರು ನಗರ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಫಲಿತಾಂಶ ಪ್ರಕಟಿಸಿದ್ದು, ಬಿಜೆಪಿ ಅಭ್ಯರ್ಥಿ ಕೆಸಿ ರಾಮಮೂರ್ತಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ 16 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಘೋಷಿಸಿದ್ದಾರೆ. 

ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಸೌಮ್ಯ ರೆಡ್ಡಿ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಇದಕ್ಕೂ ಮುನ್ನ ಸೌಮ್ಯ ರೆಡ್ಡಿ 160 ಮತಗಳಿಂದ ಗೆದ್ದಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ ಮರು ಮತ ಎಣಿಕೆ ನಡೆದ ಬಳಿಕ ಚುನಾವಣಾ ಅಧಿಕಾರಿಗಳು ಅಂತಿಮ ಫಲಿತಾಂಶ ಘೋಷಿಸಿದ್ದು ಕೆಸಿ ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಘೋಷಿಸಿದ್ದಾರೆ.

Latest Indian news

Popular Stories