ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಜೊತೆ​​ ಮೈತ್ರಿ ಮಾಡಿಕೊಳ್ಳುತ್ತೇವೆ; ಬಿಎಸ್​ ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​​ ಮೈತ್ರಿ ಬಗ್ಗೆ ಉಭಯ ಪಕ್ಷಗಳ ವರಿಷ್ಠರ ಜೊತೆ ಮಾತುಕತೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಜೆಡಿಎಸ್ ವರಿಷ್ಠರು ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಜೊತೆ​​ ಮೈತ್ರಿ ಮಾಡಿಕೊಳ್ಳುತ್ತೇವೆ.

ಜೆಡಿಎಸ್​ಗೆ ನಾಲ್ಕು ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ನಡೆದಿದೆ. ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿ ಬರಲಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 26 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

Latest Indian news

Popular Stories