ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರು ಆಲಿಸಿದರು. ನಂತರ ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿ ಜಾಮೀನು ಮಂಜೂರು ಮಾಡಿದೆ.

ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ಇನ್ನು ಎಚ್ ಡಿ ರೇವಣ್ಣ ನಾಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

Latest Indian news

Popular Stories