ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ | ಆರೋಪಿಗಳು ಪರಾರಿ

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಯುವ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆಗೈದಿದೆ. ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಠಿಣ ಕ್ರಮಕ್ಕೆ ಆಗ್ರಹಿಸಿ ಜೆಡಿಯು ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ.

ಸೌರಭ್ ಕುಮಾರ್ ಅವರು ಜೆಡಿಯು ಯುವ ನಾಯಕರಾಗಿದ್ದರು. ಬುಧವಾರ ತಡರಾತ್ರಿ ಸೌರವ್ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಮನೆಗೆ ಮರಳುತ್ತಿದ್ದರು. ಆ ವೇಳೆ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸೌರವ್ ಅವರ ಕುತ್ತಿಗೆ ಮತ್ತು ತಲೆಗೆ ಗುಂಡು ತಗುಲಿದ್ದು ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಭರತ್ ಸೋನಿ ಮಾಹಿತಿ ನೀಡಿ, “ದಾಳಿಕೋರರು ಬೈಕ್‌ನಲ್ಲಿ ಬಂದು ಸೌರವ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾನೆ. ಆದರೆ ಅವರ ದೈಹಿಕ ಸ್ಥಿತಿ ಸ್ಥಿರವಾಗಿದೆ. ಅಪರಾಧ ಎಸಗಿದವರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಪುರಾವೆಗಳನ್ನೂ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಅಮಿತ್ ಶಾ ತುಮಕೂರು ರ‍್ಯಾಲಿ ರದ್ದುಗೊಳಿಸಿದ ನಂತರ ಕಾಂಗ್ರೆಸ್‌’ಗೆ ಬೆಂಬಲ ಘೋಷಿಸಿದ ಕಾಡುಗೊಲ್ಲರು!

Latest Indian news

Popular Stories