Featured StoryNational
ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಮತ ಎಣಿಕೆ ಪ್ರಕ್ರಿಯೆ ಆರಂಭ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಆರಂಭವಾಗಿದ್ದು, ಯಾರಿಗೆ ಗೆಲುವು ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.
ಜಾರ್ಖಾಂಡ್ ವಿಧಾನಸಭಾ ಕ್ಷೇತ್ರದಲ್ಲಿ 81 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ನವೆಂಬರ್ 13ರಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ ಹಾಗೂ ನವೆಂಬರ್ 20ರಂದು ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.
ಇನ್ನು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಕೂಡ ಇಂದು ಪ್ರಕಟಗೊಳ್ಳಲಿದ್ದು, ಯಾರಿಗೆ ಗೆಲುವು ಎಂಬುದು ಇಂದು ಬಹಿರಂಗಗೊಳ್ಳಲಿದೆ.