ಗಂಡನ ಜೊತೆ ಭಾರತ ಪ್ರವಾಸ ಕೈಗೊಂಡ ಸ್ಪ್ಯಾನಿಷ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ: ಗಂಡನ ಜೊತೆ ಬೈಕ್ ನಲ್ಲೆ ಭಾರತ ಪ್ರವಾಸ ಕೈಗೊಂಡ ಸ್ಪಾನಿಷ್ ಮಹಿಳೆ ಮೇಲೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಬೈಕ್ ನಲ್ಲೆ ಪ್ರವಾಸ ಹೊರಟ ದಂಪತಿಗಳು ದುಮ್ಕಾದ ಹನ್ಸ್ದಿಹಾ ಪ್ರದೇಶದ ನಿರ್ಜನ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ತಾತ್ಕಾಲಿಕ ಟೆಂಟ್‌ ಹಾಕಿ ನಿಂತ ವೇಳೆ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, ಪ್ರವಾಸಿ ದಂಪತಿಗಳು ದ್ವಿಚಕ್ರ ವಾಹನದಲ್ಲಿ ಬಾಂಗ್ಲಾದೇಶದಿಂದ ದುಮ್ಕಾ ತಲುಪಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಈ ವೇಳೆ ಕತ್ತಲಾದ ಕಾರಣ ದುಮ್ಕಾದಲ್ಲಿ ಟೆಂಟ್‌ ಹಾಕಿ ರಾತ್ರಿ ಕಳೆಯಲು ಹಂಸ್ದಿಹಾ ಮಾರುಕಟ್ಟೆ ಬಳಿ ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ಅಪರಿಚಿತರ ತಂಡ ದಂಪತಿಗಳನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸಂತ್ರಸ್ತೆಯನ್ನು ಪ್ರಸ್ತುತ ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories