BJPಯಲ್ಲಿ ನಿಮಗೆ ಅವಮಾನವಾದರೆ ನಮ್ಮ ಪಕ್ಷ ಸೇರಿಕೊಳ್ಳಿ… ನಿತಿನ್ ಗಡ್ಕರಿಗೆ ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಂಗಳವಾರ ಮತ್ತೊಮ್ಮೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಪಕ್ಷ ತೊರೆಯುವಂತೆ ಹೇಳಿದ್ದಾರೆ.

ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಪುಸಾದ್‌ನಲ್ಲಿ ನಡೆದ ರಾಲಿಯಲ್ಲಿ ಮಾತನಾಡಿದ ಠಾಕ್ರೆ ‘ಭ್ರಷ್ಟಾಚಾರದ ಆರೋಪದಲ್ಲಿ ಬಿಜೆಪಿಯಿಂದಲೇ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ನ ಮಾಜಿ ನಾಯಕ ಕೃಪಾಶಂಕರ್ ಸಿಂಗ್ ಅವರ ಹೆಸರು ಬಿಜೆಪಿ ಪಕ್ಷ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ ಕಾಣಿಸಿಕೊಂಡಿದೆ, ಆದರೆ ಪಕ್ಷದಲ್ಲಿ ಇದ್ದುಕೊಂಡು ಒಳ್ಳೆಯ ಕೆಲಸ ಮಾಡಿರುವ ಗಡ್ಕರಿ ಅವರ ಹೆಸರು ಮಾತ್ರ ಮಾಯವಾಗಿದೆ ಎಂದು ಟೀಕಿಸಿದರು.

ಅಲ್ಲದೆ ಈ ವಿಚಾರವನ್ನು ಈ ಹಿಂದೆ ಗಡ್ಕರಿ ಅವರಿಗೆ ಹೇಳಿದ್ದೇನೆ ಮತ್ತು ನಾನು ಮತ್ತೆ ಪುನರಾವರ್ತಿಸುತ್ತಿದ್ದೇನೆ. ನಿಮಗೆ ಅವಮಾನವಾಗುತ್ತಿದ್ದರೆ, ಬಿಜೆಪಿಯನ್ನು ತೊರೆದು ಮಹಾ ವಿಕಾಸ್ ಅಘಾಡಿ (ಸೇನಾ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಮತ್ತು ಕಾಂಗ್ರೆಸ್‌ಗೆ ಸೇರಿಕೊಳ್ಳಿ. ನಾವು ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಹೇಳಿದ ಅವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವು ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

Latest Indian news

Popular Stories