Featured StoryState News

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಪುನೀತ್​ ಕೆರೆಹಳ್ಳಿ 14 ದಿನ ನ್ಯಾಯಾಂಗ ಬಂಧನ

ಆರೋಪಿ ಪುನೀತ್​ ಕೆರೆಹಳ್ಳಿ (Puneeth Kerehalli) ಜೈಲುಪಾಲಾಗಿದ್ದಾನೆ. 14 ದಿನ ನ್ಯಾಯಾಂಗ ಬಂಧನಕ್ಕೆ (Judicial custody) ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಿನ್ನೆ ಬಂಧಿಸಲಾಗಿತ್ತು.

ಇಂದು ಎನ್​​ಜಿವಿಯಲ್ಲಿರುವ ನಿವಾಸದಲ್ಲಿ ಜಡ್ಜ್ ಮುಂದೆ​ ಪೊಲೀಸರು ಹಾಜರುಪಡಿಸಿದ್ದರು. ಸೋಮವಾರ ಜಾಮೀನು ಅರ್ಜಿ ಸಲ್ಲಿಸುವಂತೆ ಜಡ್ಜ್‌ ಸೂಚನೆ ನೀಡಿದ್ದಾರೆ.

ಪುನೀತ್ ಕೆರೆಹಳ್ಳಿ ಪರ ವಕೀಲ ಉಮಾಶಂಕರ್ ಪ್ರತಿಕ್ರಿಯಿಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಕಾಟನ್ ಪೇಟೆ ಪೊಲೀಸರು ಪುನೀತ್ ಬಂಧಿಸಿದ್ದರು. ಈಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button