ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಚಿತ್ರ: ಕಾಳಿ ಸೇತುವೆ ಉದ್ಘಾಟನೆಯ ಕ್ಷಣ 1984

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ

ಕಾರವಾರ (ಮೈಸೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.


ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

ಗಾಯಗೊಂಡ ಲಾರಿ ಚಾಲಕನ ಭೇಟಿ:

ಸೇತುವೆ ಕುಸಿತದಿಂದ ಗಾಯಗೊಂಡು ಕ್ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕ ಬಾಲ ಮುರುಗನ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ರೂ.50,000 ಗಳ ವ್ಯಯಕ್ತಿಕ ಧನ ಸಹಾಯ ನೀಡಿ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು.

1001574191 Featured Story, Uttara Kannada

Latest Indian news

Popular Stories