ಕರ್ನಾಟಕದ 2ನೇ ಹಂತದ ಮತದಾನ ಆರಂಭ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನದ ಪ್ರಕ್ರಿಯೆ ಆರಂಭವಾಗಿದೆ. ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತದಾನ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​ ಯಡಿಯೂರಪ್ಪ, ಕರ್ನಾಟಕದಲ್ಲಿ 25ರಿಂದ 26 ಸ್ಥಾನದಲ್ಲಿ ಗೆಲ್ಲುತ್ತೇವೆ. ದೇಶದ ಜನ ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಬಯಸಿದ್ದಾರೆ. ದೇಶದಲ್ಲಿ ಈ ಬಾರಿ ನಾವು 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.

Latest Indian news

Popular Stories