Karnataka Congress Manifesto 2023: ಕಾಂಗ್ರೆಸ್ನ “ಸರ್ವ ಜನಾಂಗದ ಶಾಂತಿಯ ತೋಟ” ಪ್ರಣಾಳಿಕೆ ಮುಖ್ಯಾಂಶಗಳು
- ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್
- ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
- ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
- ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
- ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ
- ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
- ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
- ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
- ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
- ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ
- ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
- ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
- ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
- ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ
- ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ
- ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
ಪ್ರಣಾಳಿಕೆ ಬಿಡುಗಡೆಗೆ ಸಾಂಸ್ಕೃತಿಕ ಟಚ್ ನೀಡಲಾಗಿದೆ. ವೀಳ್ಯದೆಲೆ ಅಡಿಕೆ, ಅರಿಶಿನ, ಕುಂಕುಮ ಇಟ್ಟು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆ ಪುಸ್ತಕಕ್ಕೆ ಕನ್ನಡದ ಬಾವುಟದ ಬಣ್ಣ ಹಚ್ಚಲಾಗಿದೆ.
ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜನರ ಜತೆ ಚರ್ಚಿಸಿದ ಬಳಿಕ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಬೆಂಗಳೂರಿನ ಸಮಸ್ಯೆಗಳ ಗುರಿತಿಸಲು ಅನೇಕ ಸಂಸ್ಥೆಗಳ ಸಲಹೆ ಪಡೆದಿದ್ದೇವೆ. ನಮ್ಮ ಮುಖಂಡರ ಜತೆಗೂ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್ ಬದ್ಧತೆ’. ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಪ್ರಣಾಳಿಕೆ ತಯಾರಿ ಮಾಡಿದ್ದೇವೆ ಎಂದರು.