Featured StoryUdupi

ಕಾಪು: ಪ್ರೌಢಶಾಲಾ ವಿದ್ಯಾರ್ಥಿ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ

ಕಾಪು, ಅಕ್ಟೋಬರ್ 5: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಇನ್‌ಸ್ಪೈರ್ ಪ್ರಶಸ್ತಿ ಮನಕ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಬೇಬಿ ರಿಶಾನಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮನೆಗಳಲ್ಲಿ ಬಳಸಬಹುದಾದ ಅವರ ದಹನಕಾರಿ ಮಾದರಿಯನ್ನು ಆಧರಿಸಿ ರಿಶಾನಾ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 9 ರಿಂದ 11 ರವರೆಗೆ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ನೋಡಲ್ ಗೈಡ್ ಶಿಕ್ಷಕಿಯಾಗಿ ಜಾಯ್ಸ್ ಎಂ ಅಲ್ಫೋನ್ಸೋ ರಿಶಾನಾ ಜೊತೆಗಿರುತ್ತಾರೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button