ಯೋಧನ ಮೇಲೆ ಹಲ್ಲೆ ನಡೆಸಿ ಬೆನ್ನ ಹಿಂದೆ “ಪಿ.ಎಫ್.ಐ” ಯೆಂದು ಬರೆದ ಆರೋಪ – ತನಿಖೆ

ತಿರುವನಂತಪುರಂ: ದಕ್ಷಿಣ ಕೇರಳದಲ್ಲಿ ಯೋಧನ ಮೇಲೆ ದಾಳಿ ನಡೆದಿದ್ದು, ಹಸಿರು ಬಣ್ಣದಲ್ಲಿ ಆತನ ದೇಹದ ಹಿಂಭಾಗ ಪಿಎಫ್ಐ ಎಂದು ಬರೆಯಲಾಗಿದೆ ಎಂದು ಆರೋಪಿಸಲಾಗಿದೆ.

6 ಮಂದಿ ಈ ದಾಳಿ ನಡೆಸಿದ್ದು, ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದಾಗ ಯೋಧನ ಮೇಲೆ ದಾಳಿ ನಡೆದಿದೆ. ಸೇನಾ ಗುಪ್ತಚರ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತ ಯೋಧ ಭಾರತೀಯ ಸೇನೆಯ ಎಲೆಕ್ಟ್ರಾನಿಕ್ಸ್ ಹಾಗೂ ಮೆಕಾನಿಕಲ್ ಇಂಜಿನಿಯರ್ಸ್ ಕಾರ್ಪ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕೇರಳ ಮೂಲದ ಯೋಧನ ರಜೆಯ ಕೊನೆಯ ದಿನದಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುತಿಸಬಹುದಾದ ಆರು ಜನರ ವಿರುದ್ಧ ಐಪಿಸಿಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 341 (ತಪ್ಪಾದ ಸಂಯಮ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆಪಾದಿತ ಘಟನೆಯಲ್ಲಿ ಯಾವುದೇ ಸಂಘಟನೆ ಪಾತ್ರವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

Latest Indian news

Popular Stories