ಕಿಡ್ನ್ಯಾಪ್ ಕೇಸ್​: ಭವಾನಿ ಜಾಮೀನು ಅರ್ಜಿ ವಜಾ, ಇಂದು ರೇವಣ್ಣ ಕುಟುಂಬಕ್ಕೆ ಡಬಲ್ ಶಾಕ್​

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ಸಹ ವಜಾಗೊಂಡಿದೆ. ಇದರೊಂದಿಗೆ ಎಚ್​ಡಿ ರೇವಣ್ಣ ಕುಟುಂಬಕ್ಕೆ ಆಘಾತದ ಮೇಲೆ ಆಘಾತವಾಗಿದೆ.

ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿದೆ.

ಮೈಸೂರಿನ ಕೆಆರ್​ ಪೇಟೆಯಲ್ಲಿ ದಾಖಲಾಗಿರುವ ಕಿಡ್ನ್ಯಾಪ್ ಕೇಸ್​ನಲ್ಲಿ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಇಂದಿಗೆ (ಮೇ 31) ಜಾಮೀನು ಆದೇಶ ಕಾಯ್ದಿರಿಸಿತ್ತು. ಇದೀಗ ಕೋರ್ಟ್, ​ ಭವಾನಿ ರೇವಣ್ಣ ಅವರಿಗೆ ಜಾಮೀನು ತಿರಸ್ಕರಿಸಿದೆ.

Latest Indian news

Popular Stories