2002ರಲ್ಲಿ ಗುಜರಾತ್, 2023ರಲ್ಲಿ ಮಣಿಪುರ.. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ – ಪ್ರಧಾನಿಯ ವಿರುದ್ಧ ನಟ ಕಿಶೋರ್ ಆಕ್ರೋಶ

ಬೆಂಗಳೂರು: ಮಣಿಪುರದಲ್ಲಿನ ಹಿಂಸಾಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ನಟ ಕಿಶೋರ್ ಪ್ರಶ್ನಿಸಿದ್ದಾರೆ.

ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್ ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು? ಎಂದು ಕಿರಿಕಾರಿದರು.

ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

2002ರಲ್ಲಿ ಗುಜರಾತ್, 2023ರಲ್ಲಿ ಮಣಿಪುರ.. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ… ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ ಎಂದು ಬರೆದಿದ್ದಾರೆ.

Latest Indian news

Popular Stories